- Hide blocks
ನಾಡಗೀತೆ
ಜಯ ಭಾರತ ಜನನಿಯ ತನುಜಾತೆ
ಜಯಹೇ ಕರ್ನಾಟಕ ಮಾತೇ!
ಜಯ ಸುಂದರ ನದಿವನಗಳ ನಾಡೆ
ಜಯಹೇ ರಸಋಷಿಗಳ ಬೀಡೆ!
ಜಯಭಾರತ ಜನನಿಯ ತನುಜಾತೆ
ಜಯ ಹೇ ಕರ್ನಾಟಕ ಮಾತೆ !
ಭೂದೇವಿಯ ಮಕುಟದ ನವಮಣಿಯೆ
ಗಂಧದ ಚಂದದ ಹೊನ್ನಿನ ಗಣಿಯೆ
ರಾಘವ ಮಧುಸೂಧನರವರತಿಸಿದ
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !
ಜನನಿಯ ಜೋಗುಳ ವೇದದ ಘೋಷ
ಜನನಿಗೆ ಜೀವವು ನಿನ್ನಾವೇಶ
ಹಸುರಿನ ಗಿರಿಗಳ ಸಾಲೇ
ನಿನ್ನಯ ಕೊರಳಿನ ಮಾಲೆ
ಕಪಿಲ ಪತಂಜಲ ಗೌತಮ ಜಿನನುತ
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೇ !
ಶಂಕರ ರಾಮಾನುಜ ವಿದ್ಯಾರಣ್ಯ
ಬಸವೇಶ್ವರ ಮಧ್ವರ ದಿವ್ಯಾರಣ್ಯ
ರನ್ನಷಡಕ್ಷರಿ ಪೊನ್ನ
ಪಂಪ ಲಕುಮಿಪತಿ ಜನ್ನ
ಕುಮಾರವ್ಯಾಸರ ಮಂಗಳ ಧಾಮ
ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ!
ಜಯಹೇ ಕರ್ನಾಟಕ ಮಾತೆ!
ತೈಲಪ ಹೊಯ್ಸಳರಾಳಿದ ನಾಡೆ
ಡಂಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣಶರಾವತಿ ತುಂಗಾ
ಕಾವೇರಿನ ವರ ರಂಗ
ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ!
ಜಯ ಹೇ ಕರ್ನಾಟಕ ಮಾತೆ!
ಸರ್ವಜನಾಂಗದ ಶಾಂತಿಯತೋಟ
ರಸಿಕರ ಕಂಗಳ ಸೆಳೆಯುವನೋಟ
ಹಿಂದೂ ಕ್ರೈಸ್ತ ಮುಸಲ್ಮಾನ
ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ
ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ
ಕನ್ನಡ ತಾಯಿಯ ಮಕ್ಕಳ ದೇಹ
ಜಯ ಭಾರತ ಜನನಿಯ ತನುಜಾತೆ!
ಜಯ ಹೇ ಕರ್ನಾಟಕ ಮಾತೆ!
ಜಯ ಹೇ ಕರ್ನಾಟಕ ಮಾತೆ!
ಜಯ ಹೇ ರಸಋಷಿಗಳ ಬೀಡೆ!
- ರಾಷ್ಟ್ರಕವಿ ಕುವೆಂಪು